rtgh
Headlines

ದಿಢೀರ್‌ ಇಳಿಕೆ ಕಂಡ ಇಂಧನ ಬೆಲೆ; ವಾಹನ ಸವಾರರಿಗೆ ಸಿಕ್ತು ಗುಡ್‌ ನ್ಯೂಸ್

Fuel prices have come down

ನಮಸ್ತೆ ಕರುನಾಡು, ಮೇ 2022ರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ ಹೆಚ್ಚುತ್ತಿರುವ ತೈಲ ಬೆಲೆಗಳು ಜನರ ಜೇಬಿನ ಮೇಲೆ ಭಾರೀ ಪರಿಣಾಮ ಬೀರುತ್ತಿದ್ದು ಆದರೆ, ಈ ಹೊರೆಯಿಂದ ಶೀಘ್ರದಲ್ಲೇ ಪರಿಹಾರ ಸಿಗುವ ನಿರೀಕ್ಷೆಯಿದೆ. ಇದೀಗ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಮಹತ್ವದ ಬದಲಾವಣೆಯೊಂದು ನಡೆದಿದಿದೆ ಈ ಬದಲಾವಣೆಯ ಬಗೆಗಿನ ಹೆಚ್ಚಿನ ವಿವರವನ್ನು ನಾವು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಿದ್ದೇವೆ.

Fuel prices have come down

ಕಚ್ಚಾ ತೈಲದ ಬೆಲೆಯಲ್ಲಿ ನಿರಂತರ ಇಳಿಕೆಯ ಪರಿಣಾಮ ತೈಲ ಬೆಲೆ ಕಡಿಮೆಯಾಗಬಹುದು ಎಂದು ಅಂದಾಜಿಸಲಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 80 ಡಾಲರ್‌ಗಿಂತ ಕಡಿಮೆಯಾಗಿದ್ದು, ಹೀಗಾಗಿ, ಸರ್ಕಾರ ಶೀಘ್ರದಲ್ಲೇ ತೈಲ ಬೆಲೆ ಇಳಿಸುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ. ಲೋಕಸಭೆಯ ಚುನಾವಣೆಯ ಮುನ್ನ ತೈಲ ಬೆಲೆಯಲ್ಲಿ ಇಳಿಕೆ ಮಾಡುವ ಮೂಲಕ ಸರ್ಕಾರ ವಾಹನ ಸವಾರರಿಗೆ ಸಿಹಿ ಸುದ್ದಿಯನ್ನು ನೀಡುವ ನಿರೀಕ್ಷೆಯಿದೆ.

ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರ್ಕೆಟಿಂಗ್ ಮಾರ್ಜಿನ್ ಅನ್ನು ಕ್ರಮವಾಗಿ ಲೀಟರ್‌ಗೆ 11 ಮತ್ತು 6 ರೂ.ಯಷ್ಟು ಕಡಿಮೆ ಮಾಡಬಹುದು ಎನ್ನಲಾಗಿದೆ.

ಆಭರಣ ಪ್ರಿಯರಿಗೆ ಭರ್ಜರಿ ಕೊಡುಗೆ.! ಇಂದೇ ಖರೀದಿಸಿ

ಹೀಗಾಗಿ, ಲೋಕಸಭೆ ಚುನಾವಣೆಗೂ ಮುನ್ನ ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ಬೆಲೆಯನ್ನು ಗಣನೀಯವಾಗಿ ಇಳಿಕೆ ಮಾಡಿ ಜನಸಾಮಾನ್ಯರಿಗೆ ಕೊಂಚಮಟ್ಟಿಗೆ ರಿಲೀಫ್ ನೀಡುವ ಸಾಧ್ಯತೆಯಿದೆ.

ಕ್ರೆಡಿಟ್ ರೇಟಿಂಗ್ ಏಜೆನ್ಸಿ ಗಳು ಐಸಿಆರ್‌ಎ ಮಾಹಿತಿ ಅನುಸಾರ, ಕಚ್ಚಾ ತೈಲ ಬೆಲೆ ಕುಸಿತದಿಂದಾಗಿ, ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳಾದ ಐಒಸಿ ಮತ್ತು ಎಚ್‌ಪಿಸಿಎಲ್, ಬಿಪಿಸಿಎಲ್ ಪ್ರತಿ ಲೀಟರ್ ಪೆಟ್ರೋಲ್‌ನಲ್ಲಿ 11 ರೂಪಾಯಿ ಹಾಗೂ ಪ್ರತಿ ಲೀಟರ್ ಡೀಸೆಲ್‌ನಲ್ಲಿ 6 ರೂ ಲಾಭ ಗಳಿಸಬಹುದು. ಕಂಪನಿಗಳ ಹೆಚ್ಚಿದ ಮಾರ್ಜಿನ್‌ಗಳಿಂದಾಗಿ, ಪೆಟ್ರೋಲ್ ಮತ್ತು ಡೀಸೆಲ್‌ನ ಚಿಲ್ಲರೆ ಬೆಲೆಯಲ್ಲಿ ಇಳಿಕೆ ಆಗುವ ಸಾಧ್ಯತೆ ಇದೆ ಎಂದು ICRA ತಿಳಿಸಿದೆ. ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಸ್ಥಿರವಾಗಿದ್ದರೆ, ಶೀಘ್ರದಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಲೀಟರ್‌ಗೆ 5 ರಿಂದ 10 ರೂಪಾಯಿಗಳಷ್ಟು ಕಡಿಮೆಯಾಗಬಹುದು ಎಂದು ಅಂದಾಜಿಸಲಾಗಿದೆ.

ಬಜೆಟ್‌ ಮಂಡನೆಯಲ್ಲಿ ದೊಡ್ಡ ಘೋಷಣೆ: ಈ ಎಲ್ಲ ನಿಯಮಗಳಲ್ಲಿ ಭಾರೀ ಬದಲಾವಣೆ

ಫೆಬ್ರವರಿಯಲ್ಲಿ ಬ್ಯಾಂಕ್‌ಗಳಿಗೆ ಬರೋಬ್ಬರಿ ರಜೆ! ಸಂಪೂರ್ಣ ಪಟ್ಟಿ ಇಲ್ಲಿದೆ

Leave a Reply

Your email address will not be published. Required fields are marked *